Kannada NewsKarnataka NewsLatestPolitics

*ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತಷ್ಟು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.

ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಪೊಲೀಸರು ಶೋಧಕಾರ್ಯ ನಡೆಸಿದ್ದು, ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.

Home add -Advt

ಭೈರತಿ ಬಸವರಾಜ್ ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರು ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿದಲಾಗಿದೆ. ರಾಜ್ಯದ ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಜುಲೈ 15ರಂದು ಬೆಂಗಳೂರಿನ ಹಲಸೂರಿನಲ್ಲಿ ನಡೆದ ರೌಡಿ ಬಿಕ್ಲುಶಿವನ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿ ಜಗದೀಶ್‌ ಅಲಿಯಾಸ್‌ ಜಗ್ಗನೊಂದಿಗೆ ಶಾಸಕ ಬಸವರಾಜ್‌ಗೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. . ಬಿಕ್ಲು ಶಿವನ ಹತ್ಯೆಗೂ ಮುನ್ನ ಹತ್ತಾರು ಬಾರಿ ಭೇಟಿ ಮಾಡಿದ್ದಾರೆ. ಶಾಸಕರ ವಿರುದ್ಧ ಕೆಲವು ಪ್ರಮುಖ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕರನ್ನು ಬಂಧಿಸಿ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.


Related Articles

Back to top button