ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿಯ ಸುವರ್ಣಸೌಧ ಬಳಿ ನಡೆದಿದೆ.
ಎಸ್ಕಾರ್ಟ್ ವಾಹನ ಸಚಿವ ಭೈರತಿ ಸುರೇಶ್ ಅವರ ಕಾರಿಗೆ ಡಿಕ್ಕಿಹೊಡೆದಿದೆ. ಸಚಿವರು ಸುವರ್ಣ ಸೌಧದ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಗಿಸಿ ಹೊರ ಬರುತ್ತುದ್ದ ವೇಳೆ ಸುವರ್ಣಸೌಧದ ಪಶ್ಚಿಮ ದ್ವಾರದ ಬಳಿ ಈ ಘಟನೆ ನಡೆದಿದೆ.
ಘಟನೆಯಿಂದ ಗಾಬರಿಯಾದ ಸಚಿವರು ಎಸ್ಕಾರ್ಟ್ ವಾಹನ ಚಾಲಕ ಹಾಗೂ ಪೊಲೀಸರ ಮೇಲೆ ಗರಂ ಆದರು. ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ