Kannada NewsKarnataka NewsLatest

*ನೀರಿನ ಸೆಳೆತಕ್ಕೆ ಸಿಲುಕಿ ಭೀಮಾನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು*

ಪ್ರಗತಿವಾಹಿನಿ ಸುದ್ದಿ: ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಇಬ್ಬರು ಯುವಕರು ಭೀಮಾನದಿಯ ರಭಸಕ್ಕೆ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡೆಗೇರ ತಾಲೂಕಿನ ಮಾಚನೂರ್ ಬಳಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಭೀಮಾನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ, ಇದರಿಂದಾಗಿ ಯಾದಗಿರಿ ಜಿಲ್ಲೆಯಲ್ಲಿ ಭೀಮಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಮಳೆಯ ನಡುವೆಯೂ ಯುವಕರಿಬ್ಬರು ಜಾನುವಾರು ಮೇಯಿಸಲು ಹೋದವರು, ಜಾನುವಾರುಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.

ಸಿದ್ದಪ್ಪ (20) ಹಾಗೂ ರಾಮು (18) ನೀರು ಪಾಲಾಗಿರುವ ಯುವಕರು. ನದಿ ದಡದಲ್ಲಿ ಗ್ರಾಮಸ್ಥರು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಮತ್ತೊಂದೆಡೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಯುವಕರಿಗಾಗಿ ನದಿಯಲ್ಲಿ ಶೋಧಕಾರ್ಯಾಚರಣೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button