ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮುಸ್ಲೀಂ ಗೂಂಡಾಗಳಿಂದಲೇ ಈ ಹತ್ಯೆ ನಡೆದಿದೆ. ಯಾರನ್ನೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಭಜರಂಗದಳದ ಕಾರ್ಯಕರ್ತನಾಗಿದ್ದ ಯುವಕ ಹರ್ಷ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದರ ಹಿಂದೆ ಮುಸ್ಲೀಂ ಗೂಂಡಾಗಳ ಕೈವಾಡವಿದೆ. ಇದುವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮುಸ್ಲೀಂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಆದರೆ ಇದೀಗ ಮುಸ್ಲೀಂ ಗೂಂಡಾಗಳು ಬಾಲ ಬಿಚ್ಚಿದ್ದಾರೆ. ಮುಸ್ಲೀಂ ಗೂಂಡಾಗಳೇ ಯುವಕನನ್ನು ಹತ್ಯೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆ ಕುಮ್ಮಕ್ಕಿನಿಂದಾಗಿ ಈ ಕೃತ್ಯ ನಡೆದಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಶಿವಮೊಗ್ಗದ ಕಾಲೇಜೊಂದರಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿ ಬಾವುಟ ಹಾರಿಸಿದ್ದಾರೆ. ಸೂರತ್ ನಿಂದ ಕೇಸರಿ ಶಾಲು ತಂದು ಹಂಚಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಪ್ರಚೋದನೆ ಪಡೆದು ಮುಸ್ಲೀಂ ಗೂಂಡಾಗಳು ಇಂತಹ ಕೃತ್ಯ ನಡೆಸಿದ್ದಾರೆ. ತಪ್ಪಿತಸ್ಥರನ್ನು ಬಿಡುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ; ಬೆಚ್ಚಿಬಿದ್ದ ಜಿಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ