
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಸಾರಿಗೆ ಸಂಚಾರಕ್ಕೆ ಅಡ್ಡಿಯುಂತಾಗಿದೆ. ಈ ಹಿನ್ನೆಯಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಇಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.
ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿವಿ ಪರೀಕ್ಷೆ ಮುಂದೂಡಾಗಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ, ಬೆಂಗಳೂರು ವಿವಿಯ ಪದವಿ, ಸ್ನಾತಕೋತ್ತರ, Bed ಸೇರಿದಂತೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಭಾರತ್ ಬಂದ್; ಬೆಳಗಾವಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ