Latest

ಸೆ.27ರಂದು ಭಾರತ್ ಬಂದ್ ಗೆ ಕರೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆ.27ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಎಲ್ಲಾ ಸಂಘಟನೆಗಳು ಹೋರಾಟಕ್ಕೆ ಕೈಜೋಡಿಸುವಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಭಾರತ್ ಬಂದ್ ಗೆ ರೈತ ಸಂಘಟನೆಗಳಿಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಎಲ್ಲಾ ಸಂಘಟನೆಗಳು ಕೇವಲ ಘೋಷಣೆ ಮಾತ್ರವಲ್ಲ ನೈತಿಕವಾಗಿ ಬಂದ್ ನಲ್ಲಿ ಭಾಗಿಯಾಗಬೇಕು ಎಂದರು.

ಈ ಬಾರಿ ತೀವ್ರ ಹೋರಾಟಕ್ಕೆ ನಿರ್ಧರಿಸಲಾಗಿದ್ದು, ರೈತರೇ ಈ ಹೋರಾಟದ ಮುಂಚೂಣಿ ವಹಿಸಲಿದ್ದಾರೆ. ಭಾರತ್ ಬಂದ್ ಗೆ ಅಪಸ್ವರ ಎತ್ತುವವರು ಸರ್ಕಾರದ ಪರ ಇರುವವರು. ನಾವು ರಾಜಕೀಯ ಪಕ್ಷಗಳ ಬೆಂಬಲ ಕೇಳುತ್ತಿಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದೆ. ರೈಲ್ವೆ, ಬಂದರು, ಹೆದ್ದಾರಿ ಎಲ್ಲವನ್ನು ಖಾಸಗಿ ಕಂಪನಿಗಳಿಗೆ ನೀಡುತ್ತಿದೆ. ರೈತರೂ ಖಾಸಗೀಕರಣವಾಗಬಾರದು. ಹೀಗಾಗಿ ಸರ್ಕಾರದ ಧೋರಣೆ ವಿರುದ್ಧ ಅನ್ನದಾರು ಹೋರಾಟಕ್ಕೆ ಇಳಿಯುತ್ತಿದ್ದಾರೆ ಎಂದು ಹೇಳಿದರು.

ಸೋಮವಾರ ಬೆಂಗಳೂರಿನ ಕೆ.ಆರ್ ಪುರಂ ಮಾರುಕಟ್ಟೆಯಿಂದ ಬೆಳಿಗ್ಗೆ 8 ಗಂಟೆಗೆ ಪ್ರತಿಭಟನಾ ನಡಿಗೆ ಆರಂಭವಾಗಲಿದೆ. 11 ಗಂಟೆಗೆ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ವರೆಗೆ ರ್ಯಾಲಿ ನಡೆಸಲಾಗುವುದು ಎಂದು ವಿವರಿಸಿದರು.

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ

ಅತ್ಯಾಧುನಿಕ ಇ-ಗ್ರಂಥಾಲಯ ಸೆ.26 ರಂದು ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button