Latest

ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ; ರೈತರ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದ ಜೆಡಿಎಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ್ದು, ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.

ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾಳೆ ನಡೆಯಲಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲವಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತರು ಹೋರಾಟ ಮಾಡುತ್ತಿದ್ದಾರೆ. ಅನ್ನದಾತನ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದರು.

Home add -Advt

ಕಳೆದ ಒಂದು ವರ್ಷದಿಂದ ರೈತರು ತಮಗೆ ಬದುಕಲು ಬಿಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಕೃಷಿ ಕಾಯ್ದೆ ರೈತರಿಗೆ ಮಾರಕವಾಗಿದೆ ಎಂದು ಕಣ್ಣೀರಿಡುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಈವರೆಗೆ ರೈತರನ್ನು ಭೇಟಿಯಾಗಿ ಚರ್ಚಿಸಿಲ್ಲ. ಕೇಂದ್ರ ಸರ್ಕಾರ ರೈತರನ್ನು ಕೊಲೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾಳೆ ರೈತ ಸಂಘಟನೆಗಳು ನಡೆಸುವ ಭಾರತ್ ಬಂದ್ ಗೆ ಜೆಡಿಎಸ್ ಬೆಂಬಲ ನೀಡುತ್ತೆ. ರೈತರ ಹಿತದೃಷ್ಟಿಯಿಂದ ಯಾವುದೇ ಹೋರಾಟ ಮಾಡಿದರೂ ನನ್ನ ಬೆಂಬಲವಿರಲಿದೆ ಎಂದು ಹೇಳಿದರು.

ಯಾರು ಬೆಂಬಲ ಕೊಡಲಿ, ಬಿಡಲಿ, ನಾಳೆ ಬಂದ್ ನಡೆದೇ ನಡೆಯುತ್ತೆ; ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

Related Articles

Back to top button