Latest

ಭಾರತ್ ಬಂದ್; ರೈಲ್ವೆ ಹಳಿಗಳ ಮೇಲೆ ಕುಳಿತು ರೈತರ ಪ್ರತಿಭಟನೆ; ಹಲವೆಡೆ ರೈಲು ಸಂಚಾರ ಬಂದ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತಿರುವ ಪ್ರತಿಭಟನೆ 4 ತಿಂಗಳು ತುಂಬಿವೆ ಈ ಹಿನ್ನೆಲೆಯಲ್ಲಿ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ಹೋರಾಟಕ್ಕೆ ರಾಜ್ಯ ರೈತ ಸಂಘಟನೆಗಳು, ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಪ್ರತಿಭಟನೆಗಳು ಆರಂಭವಾಗಿದ್ದು, ಸಂಜೆ 6 ಗಂಟೆವರೆಗೂ ಪ್ರತಿಭಟನೆ ನಡೆಯಲಿದೆ.

ದೆಹಲಿ, ಪಂಜಾಬ್, ಹರ್ಯಾಣ ರಾಜ್ಯಗಳಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಬಾಲಾ, ಫಿರೋಜ್ ಪುರ ವಿಭಾಗದಲ್ಲಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನಾಕಾರರು ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ 4 ಶತಾಬ್ಧಿ ರೈಲು ಸಂಚಾರ ರದ್ದುಗೊಳಿಸಲಾಗಿದೆ.

ಇನ್ನು ರಾಜ್ಯದಲ್ಲಿ ಕೂಡ ರೈತರ ಪ್ರತಿಭಟನೆ ಕಾವೇರುತ್ತಿದ್ದು, ಕೊಪ್ಪಳ, ಚಿತ್ರದುರ್ಗ, ಕಲಬುರ್ಗಿ, ರಾಯಚೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಕೊಪ್ಪಳ ಹಾಗೂ ಚಿತ್ರದುರ್ಗದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಬಸ್ ಗಳಿಲ್ಲದೇ ವಿದ್ಯಾರ್ಥಿಗಳು ಪರದಾಟ ನಡೆಸಿದ್ದಾರೆ. ಉಳಿದೆಡೆಗಳಲ್ಲಿ ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನ ಸಂಚಾರ ಎಂದಿನಂತೆಯೇ ಇದೆ.

Home add -Advt

Related Articles

Back to top button