Latest

ಕೃಷಿ ಕಾಯ್ದೆ ವಿರೋಧಿಸಿ ಬೀದಿಗಿಳಿದ ಅನ್ನದಾತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ರಾಜ್ಯದಲ್ಲೂ ಬೆಂಬಲ ವ್ಯಕ್ತವಾಗಿದ್ದು, ಅನ್ನದಾತ ಬೆಳ್ಳಂ ಬೆಳಿಗ್ಗೆಯೇ ಬೀದಿಗಿಳಿದು ಹೋರಾಟ ನಡೆಸಿದ್ದಾನೆ.

ರೈತರ ಹೋರಾಟಕ್ಕೆ ಕನ್ನಡಪರ ಸಂಘಟನೆ ಸೇರಿದಂತೆ 50ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದು, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಆರು ಗಂಟೆಗೇ ರೈತರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಕೆಲವೆಡೆ ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಟೈರ್​ಗೆ ಬೆಂಕಿ ಹಚ್ಚಿ ಮತ್ತು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಲವಂತದ ಬಂದ್ ಗೆ ಅವಕಾಶ ವಿಲ್ಲ. ಆದರೆ ರೈತರು ವಿವಿಧ ಜಿಲ್ಲೆಗಳಲ್ಲಿ ತಂಡೋಪತಂಡವಾಗಿ ಬಂದು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೋಲಾರ ಹುಬ್ಬಳ್ಳಿಯಲ್ಲಿ ರಸೆ ತಡೆ ನಡೆಸಿರುವ ರೈತರು ಎತ್ತಿನಗಾಡಿಗಲನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿ ಪ್ರತಿಭಟನೆ ನದೆಸಿದ್ದಾರೆ. ಇದರಿಂದಾಗಿ ಬಸ್ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಪ್ರಯಾಣಿಕರು ಪದದಾಡುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಪ್ರತಿಭಟನೆಗಳು ಹೆಚ್ಚುತ್ತಿದ್ದು, ಮುಂಜಾಗೃತಾಕ್ರಮವಾಗಿ ಫ್ರೀಡಂ ಪಾರ್ಕ್, ಟೌನ್ ಹಾಲ್ ಮೊದಲಾದ ಕಡೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Home add -Advt

Related Articles

Back to top button