ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಬಳ್ಳಾರಿಯ ಗಡಿ ಭಾಗದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಅವಘಡವೊಂದು ಸಂಭವಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದು ಐವರು ಗಾಯಗೊಂಡಿದ್ದಾರೆ.
ಬಳ್ಳಾರಿಯ ಗಡಿ ಭಾಗ ಮೋಕಾ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಉತ್ಸಾಹದಲ್ಲಿ ತೆರಳುತ್ತಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ವಿದ್ಯುತ್ ಶಾಕ್ ಹೊಡೆದು ಐದು ಜನ ಕಾರ್ಯಕರ್ತರು ಗಂಭೀರವಾಗಿ ಗಾಅಗೊಂಡಿದ್ದಾರೆ.
ಕಬ್ಬಿಣದ ಪೈಪ್ ನಲ್ಲಿ ಬಾವುಟ ಹಿಡಿದು ಜೋಡೋ ಯಾತ್ರೆಯಲ್ಲಿ ಸಾಗುತ್ತಿದ್ದ ವೇಳೆ ಕಬ್ಬಿಣದ ಪೈಪ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ವಿದ್ಯುತ್ ಪ್ರವಹಿಸಿದೆ. ಐವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಧಾವಿಸಿದ ರಾಹುಲ್ ಗಾಂಧಿ, ಕಾರ್ಯಕರ್ತರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಚಿಕಿತ್ಸೆಗಾಗಿ 1 ಲಕ್ಷ ಪರಿಹಾರ ನೀಡಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ