Latest

ಬುಧವಾರ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ; ಯಾವುದೇ ಷರತ್ತು ಹಾಕಿಲ್ಲ ಎಂದ ಮಾಜಿ ಐಪಿಎಸ್ ಅಧಿಕಾರಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ತೊರೆದು ಭಾರತೀಯ ಜನತಾ ಪಾರ್ತಿ ಸೇರಲಿದ್ದಾರೆ.

ಬುಧವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು ಸಮ್ಮುಖದಲ್ಲಿ ಭಾಸ್ಕರ್ ರಾವ್ ಬಿಜೆಪಿ ಸೇರಲಿದ್ದಾರೆ.

ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಪಡೆದು ಕಳೆದ ವರ್ಷ ಆಮ್ ಆದ್ಮಿ ಪಕ್ಷ ಸೇರಿದ್ದರು. ಆದರೆ ಇದೀಗ ಆಪ್ ಗೆ ರಾಜಿನಾಮೆ ನೀಡಿ ಬಿಜೆಪಿ ಸೇರಲಿದ್ದಾರೆ.

ಆಪ್ ಪಕ್ಷವನ್ನು ಸಂಘಟಿಸಲು ಸಾಕಷ್ಟು ಪ್ರಯತ್ನ ಪಟ್ಟೆ. ಆದರೆ ಅನೇಕ ಕಾರಣಗಳಿಂದ ಕರ್ನಾಟಕದಲ್ಲಿ ಪಕ್ಷ ಬೆಳೆಸಲು ಸಾಧ್ಯವಿಲ್ಲ ಹಾಗಾಗಿ ಬಿಜೆಪಿ ಸೇರಿತ್ತಿದ್ದೇನೆ. ಬಿಜೆಪಿಗೆ ಯಾವುದೇ ಷರತ್ತು ಹಾಕಿಲ್ಲ, ಬೇಷರತ್ತಾಗಿ ಬಿಜೆಪಿ ಸೇರುತ್ತಿದ್ದೇನೆ ಎಂದು ಭಾಸ್ಕರ್ ರಾವ್ ಪ್ರಗತಿವಾಹಿನಿಗೆ ತಿಳಿಸಿದರು.

ಈ ಹಿಂದಿನ ಸುದ್ದಿ:

ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರಿದ ಭಾಸ್ಕರ್ ರಾವ್

https://pragati.taskdun.com/ips-officerbhaskar-raoaap-joinarvind-kejriwal-2/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button