Latest

ಅಭಿಮಾನಿಗಳಲ್ಲಿ ಯಡಿಯೂರಪ್ಪ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪ್ರಸ್ತುತ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ, ತಮ್ಮ ಪರವಾಗಿ ಯಾರೂ ಪ್ರತಿಭಟನೆಗೆ ಮುಂದಾಗಬಾರದು ಎಂದು ಮನವಿ ಮಾಡಿದ್ದಾರೆ.

Home add -Advt

ರಾಜಕೀಯ ಬೆಳವಣಿಗೆಯನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದು. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ. ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗಳಿಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಟ್ವೀಟ್ ಮಾಡಿದ್ದಾರೆ.

 

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕಾರಣ ಹೇಳಿದ ಸುಬ್ರಹ್ಮಣಿಯನ್ ಸ್ವಾಮಿ

Related Articles

Back to top button