Latest

ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ ಭಾಸ್ಕರ್ ರಾವ್; ರಾಜಕೀಯಕ್ಕೆ ಎಂಟ್ರಿ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿರುವ ಭಾಸ್ಕರ್ ರಾವ್, ತಮ್ಮ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

ಪ್ರಸ್ತುತ ರೈಲ್ವೆ ಇಲಾಖೆಯ ಎಡಿಹಿಪಿಯಾಗಿದ್ದ ಭಾಸ್ಕರ್ ರಾವ್, 2021ರ ಸೆಪ್ಟೆಂಬರ್ 16ರಂದು ಸ್ವಯಂ ನಿವೃತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲಿಸುವಂತೆ ಕೇಂದ್ರ ಗೃಹ ಸಚಿವಾಲಯ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿವೃತ್ತಿ ಪಡೆಯುವುದಾಗಿ ಸ್ಪಷ್ಟಪಡಿಸಿದ್ದರು.

ಆದರೆ 6 ತಿಂಗಳು ಕಳೆದರೂ ಗೃಹ ಸಚಿವಾಲಯದಿಂದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16(2) ಅಡಿ ಸೇವೆಗೆ ರಾಜೀನಾಮೆ ನೀಡಿದ್ದಾರೆ. ಭಾಸ್ಕರ್ ರಾವ್ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವ ಸಂದರ್ಭದಲ್ಲಿ ಭಾಸ್ಕರ್ ರಾವ್ ಪೊಲೀಸ್ ಅಧಿಕಾರಿ ಹುದ್ದೆಗೆ ಸ್ವಯಂ ನಿವೃತ್ತಿ ಪಡೆದಿರುವುದು ಅವರ ರಾಜಕೀಯ ನಡೆ ಬಗ್ಗೆ ಕುತೂಹಲವನ್ನು ಮೂಡಿಸಿದೆ.

ಯುಗಾದಿ: ಧಾರ್ಮಿಕ ದಿನ ಆಚರಣೆಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

Home add -Advt

Related Articles

Back to top button