Latest

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಪತ್ನಿ, ಮಗ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ಪತ್ನಿ, ಮಗ ಹಾಗೂ ಪೂಜಾರಿ ಸೇರಿದಂತೆ ಮೂವರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ಅರ್ಚಕ ನಿರಂಜನ್ ಭಟ್ ವಿರುದ್ಧವೇ ಅಪರಾಧ ಸಾಬೀತಾಗಿದ್ದು, ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

Home add -Advt

ಭಾಸ್ಕರ್ ಶೆಟ್ಟಿ ಅವರನ್ನು 2016, ಜುಲೈ 16ರಂದು ಭೀಕರವಾಗಿ ಹತ್ಯೆ ಮಾಡಿ, ಬಳಿಕ ಸಾಕ್ಷ್ಯನಾಶಮಾಡಲೆಂದು ನಂದಳಿಕೆಯಲ್ಲಿರುವ ಅರ್ಚಕ ನಿರಂಜನ್ ಭಟ್ ಮನೆಯಲ್ಲಿನ ಹೋಮಕುಂಡದಲ್ಲಿ ಹಾಕಿ ಸುಟ್ಟುಹಾಕಲಾಗಿತ್ತು. ಜುಲೈ 31ರಂದು ಭಾಸ್ಕರ್ ಶೆಟ್ಟಿ ತಾಯಿ, ಮಗ ನಾಪತ್ತೆಯಾಗಿದ್ದಾನೆಂದು ದೂರು ನೀಡಿದ್ದರು. ಪತ್ನಿ, ಪುತ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆ ಪ್ರಕರಣ ಬಯಲಾಗಿತ್ತು.

ಬಿಜೆಪಿ ನಾಯಕರಿಗೆ ಹೈಕಮಾಂಡ್ ಖಡಕ್ ಸೂಚನೆ

Related Articles

Back to top button