Karnataka NewsLatest

*ಭಟ್ಕಳ ಪಟ್ಟಣ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: 24 ಗಂಟೆಯೊಳಗೆ ಭಟ್ಕಳ ಪಟ್ಟಣ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಶಹರ ಪೊಲೀಸ್ ಠಾಣೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಭಟ್ಕಳ ಪಟ್ಟಣ ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಲಾಗಿದೆ.

ಎರಡು ಬಾರಿ ಸಂದೇಶ ಕಳುಹಿಸಲಾಗಿದ್ದು, [email protected] ನಿಂದ ಸಂದೇಶ ಬಂದಿದ್ದು, ಭಟ್ಕಳ ಪೊಲೀಸರು ಅಲರ್ಟ್ ಆಗಿದ್ದಾರೆ. ಭಟ್ಕಳ ನಗರ ಠಾಣೆಯಲ್ಲಿ ಪಿಎಸ್ ಐ ನವೀನ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

Home add -Advt

ಮುಂಜಾಗೃತಾ ಕ್ರಮವಾಗಿ ಭಟ್ಕಳ ನಗರದಾದ್ಯಂತ, ರೈಲು ನಿಲ್ದಾಣ, ಬಸ್ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಶ್ವಾನದಳ, ಬಾಂಬ್ ಪತ್ತೆದಳಗಳಿಂದ ಪರಿಶೀಲನೆ ನಡೆಸಲಾಗಿದೆ.

Related Articles

Back to top button