Politics

*ಭವಾನಿ ರೇವಣ್ಣಗೆ ಸಂಕಷ್ಟ: ಬಂಧನ ಭೀತಿಯಲ್ಲಿ ಶಾಸಕರ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ.

ಎಸ್ಐಟಿ ನೋಟಿಸ್ ಬೆನ್ನಲ್ಲೇ ಬ್ಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಕೋರ್ಟ್, ಅರ್ಜಿ ಕುರಿತ ಆದೇಶ ಇಂದಿಗೆ ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಆದೇಶ ಹೊರಬಿದ್ದಿದೆ.

ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿದೆ.

Home add -Advt

ಪತಿ ಹೆಚ್.ಡಿ.ರೇವಣ್ಣ, ಮಗ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಇದೀಗ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಇನ್ನೊದೆಡೆ ಭವಾನಿ ರೇವಣ್ಣ ಕಳೆದ 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ. ಅಜ್ಞಾತಸ್ಥಳದಲ್ಲಿ ಭವಾನಿ ರೇವಣ್ಣ, ಇದ್ದು ಕೋರ್ಟ್ ಆದೇಶದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button