Politics

*ಭವಾನಿ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕೆ.ಆರ್.ನಗರದ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ ಐಟಿ ನೋಟೀಸ್ ಬೆನ್ನಲ್ಲೇ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದ ಕೋರ್ಟ್, ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಇದೀಗ ಹೈಕೋರ್ಟ್ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಭವಾನಿ ರೇವಣ್ಣ ಪೊಲೀಸರ 85 ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಪೊಲೀಸರಿಗೆ ಬೇಕಾದಂತಹ ಉತ್ತರವನ್ನೇ ಕೊಡಬೇಕೆಂದು ಇಲ್ಲ. ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ವಾದ ಸರಿಯಲ್ಲ. ಅಲ್ಲದೇ ಮಹಿಳೆಗೆ ಬಟ್ಟೆ, ಊಟ ಕೊಟ್ಟಿಲ್ಲ ಎಂಬ ಆರೋಪ ಒಪ್ಪಲಾಗದು. ಮಹಿಳೆಯೆ ತನಗೆ ಊಟ, ಬಟ್ಟೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತಿರುವ ಹಿನ್ನೆಲೆಯಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜರೂ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button