Latest

*ಟಿಕೆಟ್ ಗೊಂದಲದ ನಡುವೆಯೂ ಚುನಾವಣಾ ಪ್ರಚಾರ ಆರಂಭಿಸಿದ ಭವಾನಿ ರೇವಣ್ಣ; ಕುತೂಹಲ ಮೂಡಿಸಿದ ನಡೆ*

ಪ್ರಗತಿವಾಹಿನಿ ಸುದ್ದಿ; ಹಾಸನ: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೆ, ಟಿಕೆಟ್ ನಿರಾಕರಿಸಿದ್ದ ಮಾಜಿ ಸಿಎಂ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಳಿ ರೇವಣ್ಣ ಹಾಸನ ಹಾಗೂ ಹೊಳೆನರಸಿಪುರ ಎರಡೂ ಕ್ಷೇತ್ರಗಳಿಂದ ತಾನೇ ಸ್ಪರ್ಧಿಸುವುದಾಗಿ ಹೊಸ ವರಸೆ ಆರಂಭಿಸಿದ್ದರು. ಈ ಮೂಲಕ ಹಾಸನ ಜೆಡಿಎಸ್ ಅಭ್ಯರ್ಥಿ ಆಯ್ಕೆ ತೀವ್ರ ಗೊಂದಲಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಭವಾನಿ ರೇವಣ್ಣ ಹಾನಸದಲ್ಲಿ ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಪತಿ ಹೆಚ್.ಡಿ.ರೇವಣ್ಣ ಅವರೊಂದಿಗೆ ಹಲು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಭವಾನಿ, ಬಳಿಕ ಹಾಸನ ಗ್ರಾಮೀಣ ಭಾಗದಲ್ಲಿ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಹಾಸನದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಹಾಸನದಲ್ಲಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಭವಾನಿ ಸಫಲರಾಗಿದ್ದಾರಾ ಎಂಬ ಕುತೂಹಲ ಮೂಡಿದೆ.

ಇನ್ನೊಂದೆಡೆ ಶಿವಮೊಗ್ಗ ಪ್ರವಾಸದಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇನ್ನೊಂದು ವಾರದಲ್ಲಿ ಹಾಸನ ಅಭ್ಯರ್ಥಿ ಆಯ್ಕೆಗೆ ಅಂತಿಮ ತೆರೆ ಎಳೆಯಲಾಗುವುದು. 2ನೇ ಕಂತಿನ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರಲಿದೆ ಎಂದು ಹೇಳಿದ್ದಾರೆ.

*ಇದನ್ನೇ ಬೇರೆಯವರು ಮಾಡಿದ್ರೆ ಹಿಂದು ವಿರೋಧಿ ಅಂತಾರೆ; ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯಾನಾ?*

Home add -Advt

https://pragati.taskdun.com/priyank-khargec-t-ravinon-vegtemple-visitattack/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button