Kannada NewsKarnataka NewsLatest

*ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಿಡ್ನ್ಯಾಪ್ ಆರೋಪ*

ಪ್ರಗತಿವಾಹಿನಿ ಸುದ್ದಿ; ಹಾಸನ: ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಾಜಿ ಕಾರು ಚಾಲಕನನ್ನು ಕಿಡ್ನ್ಯಾಪ್ ಮಾಡಿದ ಆರೋಪ ಕೇಳಿಬಂದಿದೆ.

ಮಾಜಿ ಕಾರು ಚಾಲಕ ಕಾರ್ತಿಕ್ ಈ ಬಗ್ಗೆ ದಕ್ಷಿಣ ವಲಯ ಐಜಿಪಿಗೆ ದಾಖಲೆ ಸಮೇತ ದೂರು ನೀಡಿದ್ದಾರೆ. ಕಾರ್ತಿಕ್ 10 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿದ್ದರಂತೆ. 2023 ಮಾರ್ಚ್ 12ರಂದು ಕಾರ್ತಿಕ್ ಹಾಗೂ ಅವರ ಪತ್ನಿಯನ್ನು ಬಲವಂತದಿಂದ ಕರೆದೊಯ್ದು, ಹೊಳೆನರಸೀಪುರ ತಾಲೂಕಿನಲ್ಲಿರುವ 13 ಎಕರೆ ಜಮೀನು ಮಾರಾಟ ಮಾಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಜಮೀನನ್ನು ಬೇರೆಯವರ ಹೆಸರಿಗೆ ಬರೆಸಿಕೊಂಡಿದ್ದಾರೆ ಎಂದು ಕಾರ್ತಿಕ್ ಆರೋಪಿಸಿದ್ದಾರೆ.

ಈ ಬಗ್ಗೆ ಐಜಿಪಿಗೆ ದೂರು ನೀಡಿರುವ ಕಾರ್ತಿಕ್ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ.


Home add -Advt

Related Articles

Back to top button