Politics

*ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ SIT ನೋಟಿಸ್*

ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ.

Home add -Advt

ಎಸ್ಐಟಿ ಈ ಹಿಂದೆ ಎರಡು ಬಾರಿ ಭವಾನಿ ರೇವಣ್ಣಗೆ ನೋಟಿಸ್ ನೀಡಿತ್ತು. ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಹೊರಬೀಳಲಿದೆ.

ಈ ನಡಿವೆ ಎಸ್ಐಟಿ ಭವಾನಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಮತ್ತೊಂದು ನೋಟಿಸ್ ನೀಡಿದೆ. ಇದಕ್ಕೆ ಭವಾನಿ ರೇವಣ್ಣ, ಮನೆಗೆ ಬಂದು ವಿಚಾರಣೆ ನಡೆಸುವಂತೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಅಗತ್ಯವಿದ್ದರೆ ಮನೆಗೆ ಬಂದು ವಿಚಾರಣೆ ನಡೆಸುವುದಾಗಿ ತಿಳಿಸಿರುವ ಎಸ್ಐಟಿ, ನಾಳೆ ಹೊಳೆನರಸೀಪುರ ನಿವಾಸದಲ್ಲಿ ಭವಾನಿ ರೇವಣ್ಣ ವಿಚಾರಣೆ ನಡೆಸಲಿದೆ.

Related Articles

Back to top button