Latest

*ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕನೋರ್ವ ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಎನ್ ಟಿ ಐ ಜಂಕ್ಷನ್ ಬಳಿ ನಡೆದಿದೆ.

21 ವರ್ಷದ ಸುಚಿರ್ ಮೃತ ಯುವಕ. ಸುಚಿರ್ ತಂದೆ ಅಮೆರಿಕಾದಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಒಂದುವರೆ ವರ್ಷದಿಂದ ಸುಚಿರ್ ತಾಯಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ರಾಮಯ್ಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸುಚಿರ್ ಇತ್ತೀಚೆಗೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

Home add -Advt

ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಈ ಬಾರಿ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

*ಕುಡಿಯಲು ಹಣ ಕೊಡಲಿಲ್ಲ ಎಂದು ತಾತನನ್ನೇ ಕೊಂದ ಮೊಮ್ಮಗ*

https://pragati.taskdun.com/grandfathermurdergrandsonbangalore/

Related Articles

Back to top button