
ಪ್ರಗತಿವಾಹಿನಿ ಸುದ್ದಿ: ಭೀಮಾ ನದಿಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪುಂಡಲೀಕ ಮೂಲಿಮನಿ (17) ಹಾಗೂ ಮಹೇಶ್ (16) ಮೃತ ವಿದ್ಯಾರ್ಥಿಗಳು.
ಹರಕೆ ತೀರಿದ್ಸಲು ಮಣ್ಣೂರು ಯಲ್ಲಮ್ಮನ ದೇಗುಲಕ್ಕೆ ಬಂದಿದ್ದರು. ಈ ವೇಳೆ ಭೀಮಾ ನದಿಯಲ್ಲಿ ಈಜಲು ಇಳಿದಿದ್ದರು. ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಅಫಜಲಪುರ ತಾಲೂಕಿನ ಗೌರ್ (ಕೆ) ಗ್ರಾಮದವರು ಎಂದು ತಿಳಿದುಬಂದಿದೆ.
ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



