Karnataka News

*ಭೀಮಾ ತೀರದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ: ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆ ಭೀಮಾನದಿ ತೀರದಲ್ಲಿ ಮತ್ತೆ ಮಾರಕಾಸ್ತ್ರಗಳ ಝಳಪಿಸಿದ್ದು, ಭೀಮಾತೀರದ ಹಂತಕ ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಹರಿಜನ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ದುಷ್ಕರ್ಮಿಗಳು ಬಾಗಪ್ಪ ಹರಿಜನ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದಶಕಗಳ ಹಿಂದೆ ಬಾಗಪ್ಪ ಹರಿಜನ ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ರಕ್ತದ ಹೊಳೆಯನ್ನೇ ಹಿರಿದ್ದ ಹಂತಕ ಬರ್ಬರವಾಗಿ ಕೊಲೆಯಾಗಿದ್ದಾನೆ.

ಬಾಗಪ್ಪ ವಿರುದ್ಧ 10 ಪ್ರಕರಣಗಳಿದ್ದು, ಅವುಗಳಲ್ಲಿ 6 ಕೊಲೆ ಪ್ರಕರಣಗಳಿವೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Home add -Advt

Related Articles

Back to top button