ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದ್ದು, ಬೀಮ್ಸ್ ಆಸ್ಪತ್ರೆಗೆ ನುಗ್ಗಿ ಗಲಾಟೆ ನಡೆಸಿದೆ.
ಎಂಇಎಸ್ ನ ಶುಭಂ ಶಳ್ಕೆ ನೇತೃತ್ವದಲ್ಲಿ ಬೆಳಂ ಬೆಳಿಗ್ಗೆ ಬೀಮ್ಸ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಎಂಇಎಸ್ ಪುಂಡರು, ಆಸ್ಪತ್ರೆ ಬೆಡ್, ಮೆಡಿಕಲ್ ಕಿಟ್ ಗಳ ತೆಗೆದುಕೊಂಡು ದಾಂಧಲೆ ನಡೆಸಿದ್ದಾರೆ. ಅಲ್ಲದೇ ಆಸ್ಪತ್ರೆ ನಿರುಪಯುಕ್ತ ಬೆಡ್ ಬಳಿ ನಿಂತು ವಿಡಿಯೋ ತೆಗೆದಿದ್ದಾರೆ.
ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ಆರೋಪಿಸಿ ಬೀಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ಅವರಿಗೆ ದೂರು ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ