Kannada NewsKarnataka NewsLatestPolitics

*BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಿಐಡಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ೫ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಭೈರತಿ ಬಸವರಾಜ್ ಬೆಂಗಳೂರುಗೆ ಆಗಮಿಸಿದ್ದಾರೆ. ಅಹಮದಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದ ಭೈರತಿ ಬಸವರಾಜ್, ವಿಶೇಷ ವಿಮಾನದಲ್ಲಿ ಬೆಂಗಳೂರಿನಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಸಿಐಡಿ ಪೊಲೀಸರು ಶಾಸಕ ಭೈರತಿ ಬಸವರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button