Kannada NewsKarnataka News
50 ಲಕ್ಷ ರೂ ವೆಚ್ಚದಲ್ಲಿ ಪ್ರೌಢ ಶಾಲೆಯ 6 ಕೊಠಡಿ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಸರ್ಕಾರಿ ಕನ್ನಡ ಮಾಧ್ಯಮದ ಪ್ರೌಢಶಾಲೆಗೆ ನೂತನವಾಗಿ 6 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಸಂಜೆ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ ಅನುದಾನದ ವತಿಯಿಂದ 50 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಈ ಪ್ರೌಢಶಾಲೆ ಕಳೆದ 15 ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಂಡಿರಲಿಲ್ಲ. ಈ ಪ್ರೌಢಶಾಲೆಯ ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದು, ವಿಶೇಷ ಪ್ರಯತ್ನ ಮಾಡಿ, ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಹಣ ಮಂಜೂರು ಮಾಡಿಸಿ ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಭುಜಂಗ ಜೋಯಿ, ಕಾಶೀನಾಥ್ ಧರ್ಮೋಜಿ, ನಾಗೇಶಣ್ಣ ದೇಸಾಯಿ, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವಸದಸ್ಯರು, ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




