Kannada NewsKarnataka News

ಬೆಳಗಾವಿ ಗ್ರಾಮೀಣದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಪ್ರಗತಿವಾಹಿನಿ ಸುದ್ದಿ,  ಬೆಳಗಾವಿ –  ಬಡಾಲ ಅಂಕಲಗಿ ಗ್ರಾಮದ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮದ ಹಿರಿಯರು ಭೂಮಿ ಪೂಜೆಯ ಮೂಲಕ ಚಾಲನೆಯನ್ನು ನೀಡಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆ ಮಂಜೂರಾಗಿದೆ. ಆದರೆ ವಿಧಾನಮಂಡಳದ ಅಧಿವೇಶನದ ಹಿನ್ನೆಲೆಯಲ್ಲಿ ಹೆಬ್ಬಾಳಕರ್ ಬೆಂಗಳೂರಿನಲ್ಲಿದ್ದಾರೆ. ಇದರಿಂದಾಗಿ ಕಾಮಗಾರಿ ವಿಳಂಬವಾಗಬಾರದೆನ್ನುವ ಉದ್ದೇಶದಿಂದ ಕಾಮಗಾರಿಗೆ ಪೂಜೆ ಸಲ್ಲಿಸಿ ಆರಂಭಿಸುವಂತೆ ಹೆಬ್ಬಾಳಕರ್ ಸ್ಥಳೀಯ ಜನಪ್ರತಿನಿಧಿಗಳಿಗೆ ಸೂಚಿಸಿದ್ದರು.
ಈ ಸಂದರ್ಭದಲ್ಲಿ ರಾಚಯ್ಯ ಮಹಾಸ್ವಾಮಿಗಳು, ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಹಿರೇಮಠ, ಉಪಾಧ್ಯಕ್ಷ ಬಸವಂತ ನಾಯಕ, ಕಿರಣಗೌಡ ಪಾಟೀಲ, ರಾಮನಗೌಡ ಪಾಟೀಲ, ಸಿದ್ದು ಚಾಪಗಾವ, ವಿಠ್ಠಲ, ಮಂಜನಾಥ ಅಕ್ಕನವರ, ರಾಮನಗೌಡ ಬಿ ಪಾಟೀಲ, ಗಂಗಪ್ಪ ಪಡಗಿ, ಸೋಮಪ್ಪ ತೊಲಗಿ, ಅಶೋಕ ಚಾಪಗಾವ, ಅಪ್ಪಯ್ಯ ಅಗಸಿಮನಿ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button