
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ 2 ಉದ್ಯಾನವನ ನಿರ್ಮಾಣ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.
ಸಂಕಲ್ಪ ಲೇ ಔಟ್ ಹಾಗೂ ಚಿಕ್ಕುಬಾಗ್ ಗಳಲ್ಲಿ ಉದ್ಯಾನವನಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ವಾಕಿಂಗ್ ಟ್ರ್ಯಾಕ್, ಮಕ್ಕಳ ಆಟದ ಉಪಕರಣಗಳು, ಫ್ಯಾನ್ಸಿ ಲೈಟಿಂಗ್, ಓಪನ್ ಜಿಮ್ ಹಾಗೂ ಇತರ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಕಾಂಗ್ರೆಸ್ ಮುಖಂಡ ಯುವರಾಜ ಕದಂ, ಸ್ಮಾರ್ಟ್ ಸಿಟಿ ಅಧಿಕಾರಿಗಳು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ