
ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಶಾಸಕ ಆನಂದ ಮಾಮನಿ ಕ್ಷೇತ್ರದ ವಿವಿಧೆಡೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಕೊಡ್ಲಿವಾಡ ಗ್ರಾಮದಲ್ಲಿ 2019-20 ನೇ ಸಾಲಿನ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಂದಾಜು 12 ಲಕ್ಷ ರೂ ಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಾಯಿತು.
ಯರಗಟ್ಟಿ ಗ್ರಾಮದಲ್ಲಿ 2019-20 ನೇ ಸಾಲಿನ ಪಂಚಾಯತ ರಾಜ್ ಇಲಾಖೆಯ ಅಂದಾಜು 10 ಲಕ್ಷ ರೂ ಅನುದಾನದಲ್ಲಿ ಶ್ರೀರಾಮ ಮಂದಿರದ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಲಾಯಿತು.

ಯರಗಣವಿ ಗ್ರಾಮದಲ್ಲಿ 2019-20 ನೇ ಸಾಲಿನ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಂದಾಜು 10 ಲಕ್ಷ ರೂ ಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್(ಮೆಲ್ಮಟ್ಟ ನೀರು ಸಂಗ್ರಹ) ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಾಯಿತು.

ಕ್ಷೇತ್ರದಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಜನರ ಸಹಕಾರದಿಂದ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಾಗುತ್ತಿದೆ ಎಂದು ಮಾಮನಿ ಈ ಸಂದರ್ಭದಲ್ಲಿ ತಿಳಿಸಿದರು.
ಈ ವೇಳಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಕಾರ್ಯಕರ್ತರು ಉಪಸ್ಥಿತರಿದ್ದು.