ಪ್ರಗತಿವಾಹಿನಿ ಸುದ್ದಿ,ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಶಾಹುನಗರದಲ್ಲಿ ನೀರು ಶುದ್ದೀಕರಣ ಘಟಕ (ಆರ್ ಓ ಪ್ಲಾಂಟ್) ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಭೂಮಿ ಪೂಜೆ ನೆರವೇರಿಸಿದ ಕಾಮಗಾರಿಗೆ ಚಾಲನೆ ನೀಡಿದರು.
ಸ್ಥಳೀಯ ನಾಗರಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.