*ಪಿ.ಯು ಇಂಟಿಗ್ರೇಟೆಡ್ ಕಾಲೇಜಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿಯಲ್ಲಿ ಜೊಲ್ಲೆ ಶಿಕ್ಷಣ ಸಂಸ್ಥೆಯಿಂದ ಹೊಸದಾಗಿ ಆರಂಭಗೊಳ್ಳಲಿರುವ ಪಿ.ಯು ಇಂಟಿಗ್ರೇಟೆಡ್ ಕಾಲೇಜಿನ ವಿದ್ಯಾರ್ಥಿವಸತಿ ನಿಲಯದ ಭೂಮಿ ಪೂಜೆಯನ್ನು ಆಶಾಜ್ಯೋತಿ ವಿಶೇಷ ಮಕ್ಕಳ ವಸತಿ ಶಾಲೆಯ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯುಥ್ ಫೌಂಡೇಶನ್ ನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ನೆರವೇರಿಸಿ ಚಾಲನೆ ನೀಡಿದರು.
ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಬಸವಪ್ರಸಾದ ಜೊಲ್ಲೆ ಮಾತನಾಡಿ, ಇಂದಿನ ದಿನಗಳಲ್ಲಿ ವೈದ್ಯಕೀಯ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಸಾಧನೆಗೈಯಲು ಪದವಿ ಪೂರ್ವ ಕಾಲೇಜು ಮಟ್ಟದಲ್ಲಿ ನೀಟ್, ಜೆ.ಇ.ಇ ಅಡ್ವಾನ್ಸ್ಡ್, ಕೆ-ಸಿ.ಇ.ಟಿ ಅಂತಹ ಪರೀಕ್ಷೆಗಳು ದೇಶದ ಉತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ನೀಡುವುದನ್ನು ಮನಗೊಂಡು ಜೊಲ್ಲೆ ಶಿಕ್ಷಣ ಸಂಸ್ಥೆಯು ಇಂದು ನಿಪ್ಪಾಣಿಯಲ್ಲಿ ವಸತಿ ಸಹಿತ ಸ್ವತಂತ್ರ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ಭೂಮಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡುತ್ತಿದ್ದು, ಮುಂಬರುವ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇದು ಉದ್ಘಾಟನೆಗೊಳ್ಳಲಿದ್ದು, ಈ ಭಾಗದ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಹಸಿವನ್ನು ಅದು ನೀಗಿಸಲಿದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ದೀಪಕ ಪಾಟೀಲ, ಮುಖ್ಯೋಪಾಧ್ಯಾಯ ಹೆಚ್. ಪಿ ಮಾನಪ್ಪನ್ನವರ,ಅಲೋಕ ಚೌಗಲೆ, ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.
https://pragativahini.com/mandeathin-caron-ac/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ