
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸುಮಾರು 4 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೊಂದನ್ನು ಎರಡೂವರೆ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಭೂಮಿ ಪೂಜೆ ನೆರವೇರಿಸಲಾಯಿತು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪ್ರಯತ್ನದಿಂದ 2.5 ಕೋಟಿ ರೂ. ಮಂಜೂರಾಗಿದೆ. ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮಗಳ ಹಿರಿಯರು, ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ ಹಾಗೂ ಕಾರ್ಯಕರ್ತರು ಸೇರಿ ಚಾಲನೆಯನ್ನು ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ