

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರಿಂದಲೇ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಗ್ರಾಮಸ್ಥರೇ ಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಿದರು.

ಕ್ಷೇತ್ರದ ಶಾಹು ನಗರದ ಬಂಜಾರಾ ಕಾಲೋನಿಯಲ್ಲಿ ನೂತನ ಸಮುದಾಯ ಭವನ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ನಂತರ ಕಂಗ್ರಾಳಿ ಬಿ.ಕೆ ಗ್ರಾಮದ ಸಂತಾಜೀ ಗಲ್ಲಿಯ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಇದಾದ ನಂತರ, ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ ಅಭಿವೃದ್ಧಿ ಹಂತದಲ್ಲಿರುವ ವಿವಿಧ ಕಾಮಗಾರಿಗಳ ಪ್ರಗತಿಗಳನ್ನು ಮೃಣಾಲ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಆಯಾ ಗ್ರಾಮದ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ