Kannada NewsKarnataka NewsNationalPolitics

*ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ನೇಮಕ*

ಪ್ರಗತಿವಾಹಿನಿ ಸುದ್ದಿ: ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಈ ಕುರಿತು ಮಾಹಿತಿ ನೀಡಿದ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್, ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಮೇ 14ರಂದು ಮುಕ್ತಾಯವಾಗಲಿದ್ದು, ನಂತರ ನ್ಯಾಯಮೂರ್ತಿ ಗವಾಯಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಈ ಸಂಬಂಧ, ನ್ಯಾ. ಗವಾಯಿ ಅವರ ಹೆಸರನ್ನು ಏಪ್ರಿಲ್ 16ರಂದು ನ್ಯಾ. ಖನ್ನಾ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ಗವಾಯಿ ಅವರ ಅಧಿಕಾರಾವಧಿ ಆರು ತಿಂಗಳುಗಳವರೆಗೆ ಇರಲಿದ್ದು, ನವೆಂಬರ್‌ನಲ್ಲಿ ಅವರಿಗೆ 65 ವರ್ಷ ಪೂರ್ತಿಯಾಗುವ ಕಾರಣ ಅಂದು ಅವರು ನಿವ.ತಿ ಹೊಂದಲಿದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button