Karnataka News

*ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನಸಾಗರ: ನೂಕು ನುಗ್ಗಲು; ಓರ್ವ ಮಹಿಳೆ ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: 18 ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಕೆಲವೇ ಹೊತ್ತಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದತ್ತ ಹರಿದು ಬರುತ್ತಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನಸಾಗರವೇ ನೆರೆದಿದೆ. ಸ್ಟೇಡಿಯಂ ನ 18, 19, 20 ನೇ ಗೇಟ್ ಗಳನ್ನು ಓಪನ್ ಮಾಡುತ್ತಿದ್ದಂತೆ ಜನರು ಏಕಾಏಕಿ ಸ್ಟೇಡಿಯಂ ಒಳಗೆ ನುಗ್ಗಿದ್ದಾರೆ.

ಈ ವೇಳೆ ನೂಕು ನುಗ್ಗಲು ಉಂಟಾಗಿದೆ, ತೀವ್ರ ನೂಕುನುಗ್ಗಲಿನಿಂದಾಗಿ ಮಹಿಳೆಯೊಬ್ಬರು ಕೆಳಗೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದಾರೆ. ಅವರಿಗೆ ಸ್ಥಳದಲ್ಲಿದ್ದ ಜನರು ನೀರು ಕುಡಿಸಿ, ಗಾಳಿ ಹಾಕಿ ಆರೈಕೆ ಮಾಡಿದ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button