ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಸೈಕಲ್ ವಿತರಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಗುರುವಾರ ಸ್ಥಳೀಯ ಜನಪ್ರತಿನಿಧಿಗಳು ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಅವರ ಪುತ್ರ, ಯುವಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಸಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಿಕ್ಷಕರು ಸೈಕಲ್ ವಿತರಣೆ ಮಾಡಿದರು.
ಮಾಸ್ತಮರ್ಡಿ
ಮಾಸ್ತಮರ್ಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಎಸ್ ಡಿ ಎಮ್ ಸಿ ಅಧ್ಯಕ್ಷ ಬಸವರಾಜ ಥೋರ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಸಿ ಸಿ ಪಾಟೀಲ, ಮೃಣಾಲ ಹೆಬ್ಬಾಳಕರ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಂ ಎಸ್ ಮೇದಾರ ಮೊದಲಾದವರು ಸೈಕಲ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳು, ವಿ ಎಮ್ ಕುಂಬಾರ, ಸಹ ಶಿಕ್ಷಕರು ಉಪಸ್ಥಿತರಿದ್ದರು.
ಹಿರೇ ಬಾಗೇವಾಡಿ
ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಸ್ಥಳಿಯ ಜನ ಪ್ರತಿನಿಧಿಗಳು ಸೈಕಲ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲಾವತಿ ಧರೆಣ್ಣವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಸಿ ಪಾಟೀಲ, ಮೃಣಾಲ ಹೆಬ್ಬಾಳಕರ, ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಬಸವರಾಜ ಹಂಚಿನಮನಿ, ರೈತ ಸೇವಾ ಸಂಘದ ಅಧ್ಯಕ್ಷ ಪ್ರಶಾಂತ ದೇಸಾಯಿ, ಗೌಸ್ ಜಾಲಿಕೊಪ್ಪ, ಉಳವಪ್ಪ ರೊಟ್ಟಿ, ಮೀರಾಸಾಬ್ ನದಾಫ, ರಾಜು ಬೆಟಗೇರಿ, ಬಿ ಎನ್ ಪಾಟೀಲ, ಚಂದ್ರು ಬಾನಿ, ಅಡಿವೇಶ ಇಟಗಿ, ಶ್ರೀಕಾಂತ ಮಧುಬರಮಣ್ಣವರ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ