ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ನೌಕರರು ಕೇಂದ್ರ ಬಸ್ ನಿಲ್ದಾಣದಿಂದ ಸೈಕಲ್ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿಯ ಮೂಲಕ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಸರಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗಗಳ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ. ಸಾರಿಗೆ ನೌಕರರಿಗೆ ಸಮಾನ ವೇತನ, ಆಯೋಗ ಮಾದರಿಯಲ್ಲಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಸಾರಿಗೆ ಮುಷ್ಕರ ಸಮಯದಲ್ಲಿ ಮಾಡಿರುವ ವಜಾ ಪ್ರಕರಣವನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ವಿಭಾಗದ ನೌಕರರಿಗೆ ಚಾಲ್ತಿಯಲ್ಲಿರುವ ವೇತನದ ಆಯೋಗದ ಮಾದರಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಮುಷ್ಕರದ ಸಂದರ್ಭದಲ್ಲಿ ನಾಲ್ಕು ವಿಭಾಗದ ನೌಕರರ ಮೇಲೆ ಹಾಗೂ ಅವರ ಕುಟುಂಬದವರ ಮೇಲೆ ದಾಖಲಾದ ಪ್ರಕರಣವನ್ನು ತತಕ್ಷಣ ಹಿಂಪಡೆಯಬೇಕು. ಸಾರಿಗೆ ಸಂಸ್ಥೆಯಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಖಾಸಗಿಯವರನ್ನು ನೇಮಿಸಿದ್ದು ಕೈ ಬಿಡಬೇಕೆಂದು ಮನವಿಯಲ್ಲಿ ಆಗ್ರಹಿಸಿದರು.
ಮಹೇಶ ಶಿಗಿಹಳ್ಳಿ, ದೀಪಕ ನಾವೇಕರ, ವಿಶಾಲ ಮಾದರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬಿಜೆಪಿ ಪಾಲಿಗೆ ಶೂನ್ಯ ಸೃಷ್ಟಿಸಿದ ಆನಂದ ಮಾಮನಿ ನಿಧನ: 3 ಹೆಸರಿನ ಮಧ್ಯೆನನ ರ ಯಾರಿಗೆ ಸಿಗಲಿದೆ ಯಲ್ಲಮ್ಮನ ಕೃಪೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ