*ಬಿಡದಿಯಲ್ಲಿ ಐಟಿ ಸಿಟಿ ಸ್ಥಾಪನೆ: ಹೊಸ ಪ್ರತಿಭೆ, ತಂತ್ರಜ್ಞಾನಕ್ಕೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿರುವ ಬಗ್ಗೆ ಕೇಳಿದಾಗ “ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು, ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ” ಎಂದರು.
“ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್ ಅಪ್ ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಿವೆ. ನೀವು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕು ಎಂದು ನಮ್ಮ ಮುಂದಿನ ಪೀಳಿಗೆಗೆ ನಾನು ಸದಾ ಹೇಳುತ್ತಿರುತ್ತೇನೆ. ಹೊಸ ಆಲೋಚನೆಗಳು ಬಂದರೆ ಸ್ಟಾರ್ಟ್ ಅಪ್ ಮೂಲಕ ಬೆಳೆಯಲು ಸರ್ಕಾರ ಅವಕಾಶ ಕಲ್ಪಿಸಿ ನಿಮ್ಮ ಜೊತೆಗಿದೆ ಎಂದು ಹೇಳುತ್ತಿರುತ್ತೇನೆ. ನಮ್ಮನ್ನು ನಂಬಿ ಬಂದವರಿಗೆ ಉತ್ತಮ ಅವಕಾಶ ನೀಡುವುದು ನಮ್ಮ ಕೆಲಸ. ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲಾಗುವುದು” ಎಂದರು.
“ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕಿಯೋನಿಕ್ಸ್ ಜವಾಬ್ದಾರಿ ಹೊತ್ತಿರುವ ಶರತ್ ಬಚ್ಚೇಗೌಡರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ನಾವೆಲ್ಲರೂ ಇದ್ದೇವೆ. ಬೆಂಗಳೂರಿನ ವಾತಾವರಣವೇ ಎಲ್ಲದಕ್ಕೂ ಅನುಕೂಲಕರವಾಗಿದೆ. 25 ಲಕ್ಷ ಐಟಿ ಪರಿಣಿತರು ಇಲ್ಲಿದ್ದಾರೆ. ನಮ್ಮಲ್ಲಿರುವ ಮಾನವ ಸಂಪನ್ಮೂಲಗಳು ಬೇರೆ ಎಲ್ಲೂ ಇಲ್ಲ. ಈ ಸಮ್ಮೇಳನ ಮೂಲಕ ಮೂರು ದಿನಗಳ ಕಾಲ ಭವಿಷ್ಯದ ಬಗ್ಗೆ ಚರ್ಚೆ ಮಾಡಲಾಗುವುದು” ಎಂದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಎಲ್ಲಾ ಕ್ಷೇತ್ರಗಳಿಗೆ ಅದರದೇ ಆದ ನೀತಿ ರೂಪಿಸಿ, ಪ್ರೋತ್ಸಾಹ ನೀಡುತ್ತಿದೆ.
ಹೊಗಳಿದರೂ ಸ್ವಾಗತ, ಟೀಕಿಸಿದರೂ ಸ್ವಾಗತ
ರಸ್ತೆಗಳ ದುರಸ್ತಿ ಕಾರ್ಯಕ್ಕೆ ಹಲವಾರು ಕಂಪೆನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಬಗ್ಗೆ ಕೇಳಿದಾಗ, “ನಾವು ನಮ್ಮ ಕೆಲಸ ಮಾಡಿದ್ದೇವೆ. ಟೀಕೆ ಮಾಡಿದರೂ ಸ್ವಾಗತ, ಹೊಗಳಿದರೂ ಸ್ವಾಗತ. ಜನಸೇವೆ ಮಾಡುವುದೇ ಮೊದಲ ಆದ್ಯತೆ” ಎಂದರು.
New IT city in Bidadi: DCM DK Shivakumar
Bengaluru, Nov 18: Deputy Chief Minister DK Shivakumar today said that a new IT city is being planned in Bidadi as leaders from many countries are coming forward to invest billions of dollars in Bengaluru.
Speaking to reporters at his Sadashivanagar residence, he said, “Leaders from several countries keep meeting me. They are all excited about investing in Bengaluru and we are supporting their investments in every way possible. Representatives from 60 countries are participating in Bengaluru Tech Summit 2025.” He was replying to a question on Bengaluru Tech Summit starting in Bengaluru today.
“The local talent, innovation, technology and start-ups will take Karnataka in a new direction if encouraged properly. I always call upon the youth to compete at a global level. We will always support those who come to Karnataka seeking opportunities,” he added.
“IT Minister Priyank Kharge and Keonics head Sharath Bachche Gowda are doing a great job. There are about 25 lakh IT experts in Bengaluru and no other place on earth has this kind of talent pool. The Tech summit will discuss the future of IT for the next three days,” he added.
Praise for road repair
Asked about some companies praising government’s efforts in repairing the roads in Bengaluru, he said, “We welcome both praise and criticism. Our priority is to serve the people.”




