
ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ
ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬಿಜೆಪಿ-ಜೆಡಿಎಸ್ ನಾಯಕರು ಪಾಅದಯತರೆ ಆರಂಭಿಸಿದ್ದು, ಬೈರಮಂಗಲದಲ್ಲಿ ಚಾಲನೆ ನೀಡಲಾಗಿದೆ.
ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುವ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ೦ ಭೈರಮಂಗಲ ಗ್ರಾಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಹೆಚ್‌ಡಿಕೆ, ರೈತರ ಹಿತಕ್ಕಾಗಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ. ಕಳೆದ 515 ದಿನಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಯಾವುದೇ ರೀತಿಯ ಬೆದರಿಕೆಗೆ ಬಗ್ಗದೇ ರೈತರು ಹೋರಾಟ ಮುಂದುವರಿಸಿದ್ದಾರೆ. ನಮ್ಮ ಪಾದಯಾತ್ರೆ ರೈತರ ಹಿತಕ್ಕಾಗಿ ನಡೆಯುತ್ತಿದೆಯೇ ಹೊರತು ರಾಜಕೀಯ ಸ್ವಾರ್ಥಕ್ಕಾಗಿ ಅಲ್ಲ ಎಂದು ಹೇಳಿದರು.
2006ರಲ್ಲಿ ಯೋಜನೆ ಪ್ರಾರಂಭಿಸಿದಾಗ ಇದ್ದ ತೀರ್ಮಾನವೇ ಬೇರೆ ಆಗಿತ್ತು. ನಮ್ಮ ಅವಧಿಯಲ್ಲಾಗಲಿ, ಬಿಜೆಪಿ ಸರ್ಕಾರದ ಅವಧಿಯಲ್ಲಾಗಲಿ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆ ಹೊರಡಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ರೈತರ ಜಮೀನಿಗೆ ಮೊದಲು 2 ಕೋಟಿ ರೂ. ಕೊಡುತ್ತೇವೆ ಎಂದವರು ಈಗ 3 ಕೋಟಿ ರೂ. ಕೊಡುತ್ತೇವೆ ಎನ್ನುತ್ತಿದ್ದಾರೆ. ಏನು ವ್ಯಾಪಾರ ಮಾಡುತ್ತಿದ್ದೀರಾ? ರೈತರ ಭೂಮಿಯನ್ನು ಪೊಲೀಸ್ ಬಲ ಬಳಸಿ ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. 2006ರಲ್ಲಿ 2,600 ಎಕರೆ ಸರ್ಕಾರಿ ಜಮೀನು ಇತ್ತು. ಅದು ಈಗ ಎಲ್ಲಿಗೆ ಹೋಯಿತು ? ದೆಹಲಿಗೆ ಹಣ ಕೊಡಲು ಬಿಡದಿ ಟೌನ್‌ಶಿಪ್ ಯೋಜನೆ ಬೇಕಾ? ಎಂದು ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು.



