Karnataka NewsLatestPolitics

*ಹೆಚ್.ಡಿ.ಕುಮಾರಸ್ವಾಮಿ ವಿಡಿಯೋ ಬಿಡುಗಡೆ ಮಾಡಿದ ಶಾಸಕ ಬಾಲಕೃಷ್ಣ*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್​ಶಿಪ್​ಗೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿಪಕ್ಷ ಜೆಡಿಎಸ್​ ನಾಯಕರ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರು ಒಂದೆಡೆ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಬೆಂಬಲ ನೀಡಿದೆ.

ಜೂನ್ ೨೦ರಂದು ವಿಪಕ್ಷಗಳ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈಗಾಗಲೇ ಬಿಡದಿ ಟೌನ್​​ ಶಿಪ್ ಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ಶಾಸಕ ಹೆಚ್​​​​​ಸಿ ಬಾಲಕೃಷ್ಣ, ಬಿಡದಿ ಟೌನ್​ಶಿಪ್ ಮಾಡುವ ಪ್ಲ್ಯಾನ್ ಇತ್ತು ಎನ್ನುವ ಕುಮಾರಸ್ವಾಮಿಯ ವಿಡಿಯೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.

ಬಿಡದಿ ಟೌನ್ ಶಿಪ್ ಮಾಡುವ ಪ್ಲ್ಯಾನ್ ಇತ್ತು ಎಂದು ರೈತರೊಂದಿಗಿನ ಮೀಟಿಂಗ್ ನಲ್ಲಿ ಕುಮಾರಸ್ವಾಮಿ ಮಾಡಿದ್ದ ವಿಡಿಯೋ ಕಾಲ್​ ಕುರಿತ ವಿಡಿಯೋ ಇದಾಗಿದ್ದು, ಶೇ.40ರಷ್ಟು ಡೆವಲಪ್ಮೆಂಟ್ ಲ್ಯಾಂಡ್ ನೀಡಲು ನಾನು ರೆಡಿ ಇದ್ದೆ ಎಂದಿದ್ದಾರೆ. ಇದೀಗ ಕುಮಾರಸ್ವಾಮಿಯವರ ಈ ವಿಡಿಯೋ ಭಾರಿ ಚರ್ಚೆಗೆ ಕಾರಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button