Karnataka NewsLatestPolitics

*ಎರಡನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಬಿಡದಿ ಪಾದಯಾತ್ರೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಾಥ್*

ಪ್ರಗತಿವಾಹಿನಿ ಸುದ್ದಿ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೆಂಬಲ ದೊರೆತಿದೆ.

ನಿಖಿಲ್ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ಇಂದು 16 ಕಿಲೋಮೀಟರ್ ದೂರ ಪಾದಯತರೆ ಸಾಗಲಿದ್ದಾರೆ. ಪಾದಯಾತ್ರೆಯು ಇಂದು ಬೆಳಿಗ್ಗೆ 11 ಗಂಟೆಗೆ ಬಿಡದಿಯಿಂದ ಮೈಸೂರು ರಸ್ತೆ ನೈಸ್ ಜಂಕ್ಷನ್ ವರೆಗೆ ಸಾಗಲಿದೆ. ನಿನ್ನೆ, ಪಾದಯಾತ್ರೆಯ ಮೊದಲ ದಿನ ಏಳು ಕಿಲೋಮೀಟರ್ ಕ್ರಮಿಸಲಾಗಿತ್ತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಆರ್. ಅಶೋಕ್ ಅವರು ನಿನ್ನೆಯ ಪಾದಯಾತ್ರೆಗೆ ಚಾಲನೆ ನೀಡಿದ್ದರು. ಇಂದು ನಡೆಯಲಿರುವ ಪಾದಾಯಾತ್ರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕೂಡ ಪಾಲ್ಗೊಳ್ಳಲಿದ್ದಾರೆ.

Home add -Advt

ಬಿಡದಿ ಟೌನ್‌ಶಿಪ್ ನಿರ್ಮಾಣದಿಂದ ಸ್ಥಳೀಯ ರೈತರು ಮತ್ತು ಜನರಿಗೆ ಆಗುವ ತೊಂದರೆಗಳನ್ನು ಎತ್ತಿ ಹಿಡಿದು, ಈ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಈ ಪಾದಯಾತ್ರೆ ನಡೆಸಲಾಗುತ್ತಿದೆ. ಇದೊಂದು ಬೃಹತ್ ಪ್ರತಿಭಟನೆಯಾಗಿ ರೂಪುಗೊಂಡಿದ್ದು, ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

Related Articles

Back to top button