
ಪ್ರಗತಿವಾಹಿನಿ ಸುದ್ದಿ: ಬೀದರ್ ನ ಗುರುದ್ವಾರ ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಬೀದರ್ ನ ಗುರುದ್ವಾರದ ಅಮೃತ ಕುಂಡ ಯಾತ್ರಿಕ ನಿವಾಸದಲ್ಲಿ ಬಾಂಬ್ ಸ್ಫೋಟವಾಗಲಿದೆ ಎಂದು ಕಿಡಿಗೇಡಿಯೊಬ್ಬ ಇ-ಮೇಲ್ ಮೂಲಕ ಸಂದೇಶ ರವಾನಿಸಿದ್ದಾನೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.