Kannada NewsKarnataka NewsLatest
*BREAKING: ಮೊಳಕೇರಾದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ: ಶಾಲೆಗೆ ತೆರಳುತ್ತಿದ್ದ 6 ವಿದ್ಯಾರ್ಥಿಗಳಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ೬ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಮಕ್ಕಳು ಶಾಲೆಗೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ 6 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಳುಗಳನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೊಳಕೇರಾ ಗ್ರಾಮದಲ್ಲಿ ಕಳೆದ ಒಂದು ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದ್ದು, ಗ್ರಾಮದಲ್ಲಿ ಪದೇ ಪದೇ ಅನುಮಾನಾಸ್ಪದ ವಸ್ತು ಸ್ಫೋಟಗೊಳ್ಳುತ್ತಿರುವ ಬಗ್ಗೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



