
ಪ್ರಗತಿವಾಹಿನಿ ಸುದ್ದಿ: ಕಾರಂಜಾ ಡ್ಯಾಂ ಕಾಲುವೆಗೆ ಹಾರಿ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರು ಬಳಿ ಕಾರಂಜಾ ಡ್ಯಾಂ ನ ಎಡದಂಡೆ ಕಾಲುವೆಗೆ ಒಂದೇ ಕುಟುಂಬದ 6 ಜನರು ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.
ಸಾಲಬಾಧೆಯಿಂದ ನೊಂದು ಇಡೀ ಕುಟುಂಬವೇ ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.