Kannada NewsKarnataka NewsLatest

*ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಅಡುಗೆ ಸಹಾಯಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಅಡುಗೆ ಸಹಾಯಕರೊಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಅಡುಗೆ ಸಹಾಯಕ ಪ್ರಮೋದ್ ಅಮಾನತುಗೊಂಡವರು. ಬಸವಕಲ್ಯಾಣದಲ್ಲಿ ನಡೆದ ಆರ್.ಎಸ್.ಎಸ್ ಪಥಸಂಚಲನದಲ್ಲಿ ಪ್ರಮೋದ್ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ಪ್ರಮೋದ್ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಡುಗೆ ಸಹಾಯಕನನ್ನು ಅಮಾನತುಗೊಳಿಸಿರುವ ಕ್ರಮಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button