Kannada NewsKarnataka NewsLatest

*ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಅವಘಡ: ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತನ ಕಾಲು ಕಟ್*

ಪ್ರಗತಿವಾಹಿನಿ ಸುದ್ದಿ: ಮಹಾತ್ಮ ಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ಅವಘಡ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಮೂವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಕಾಲು ಕಟ್ ಆಗಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ನಡೆದಿದೆ. ರಥೋತ್ಸವಕ್ಕೆ ಭಕ್ತಸಾಗರೇ ಹರಿದು ಬಂದಿದೆ. ಭಕ್ತರು ರಥೋತ್ಸವದ ವೇಳೆ ರಥ ಎಳೆಯುತ್ತಿದ್ದಾಗ ನೂಕು ನುಗ್ಗಲು ಉಂಟಾಗಿ ಕೆಲವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ರಥ ಮುಂದೆ ಸಾಗಿದಾಗ ರಥದ ಚಕ್ರಕ್ಕೆ ಸಿಲುಕಿ ಓರ್ವನ ಎರಡೂ ಕಾಲುಗಳು ಕಟ್ ಆಗಿವೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಧನರಾಜ್, ಭೀಮಾಶಂಕರ್ ಹಾಗೂ ರಿಷಬ್ ಗಾಯಾಳುಗಳು. ಧನರಾಜ್ ಅವರ ಎರಡೂ ಕಾಲುಗಳು ಕಟ್ ಆಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button