Karnataka News

*ಮಕ್ಕಳನ್ನು ಕೊಂದು ತಂದೆ-ತಾಯಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ತಾಲುಕಿನ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ.

ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ದಂಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (38) ಪತ್ನಿ ಮಮತಾ (30) ಮಕ್ಕಳಾದ 5 ವರ್ಷದ ಅಧೀರ್ ಹಾಗೂ 2 ವರ್ಷದ ಅನಯ ಮೃತ ದುರ್ದೈವಿಗಳು.

Home add -Advt

ಕಲಬುರಗಿ ಮೂಲದ ಅವಿನಾಶ್ ಬೆಂಗಳೂರಿನಲ್ಲಿ ಏರ್ ಪೋರ್ಟ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸಿಂಗನಾಯಕನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇಬ್ಬರು ಪುಟ್ಟ ಮಕ್ಕಳಿಗೆ ವಿಷಕೊಟ್ಟು ಬಳಿಕ ದಂಪತಿ ನೇಣಿಗೆ ಕೊರಳೊಡ್ಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button