
ಪ್ರಗತಿವಾಹಿನಿ ಸುದ್ದಿ; ಬೀದರ್: ಡಿಪೋ ಕೊಠಡಿಯಲ್ಲಿಯೇ ಬಸ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಎನ್ ಇಕೆಆರ್ ಟಿಸಿ ನೌಕರ ಓಂಕಾರ ಭಾಲ್ಕಿ ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. ಕಲೆದ 8 ವರ್ಷಗಳಿಂದ ಬಸ್ ಚಾಲಕನಾಗಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಈಗ ಏಕಾಏಕಿ ಬಸ್ ಡಿಪೋ ಕೊಠಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗೆಂದು ಬಸ್ ತೆಗೆದುಕೊಂಡು ಹೋಗಿ ಬಂದಿದ್ದ ಚಾಲಕ ಬಳಿಕ ಆತ್ಮಹತ್ಯೆಗೆ ಶರಣಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.