ದೆಹಲಿ ಕಾರ್ಯಕ್ರಮದಿಂದ ಬೀದರ್ ಗೆ ಬಂದಿರುವ 11 ಜನರಲ್ಲಿ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ: ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬೀದರ್ ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

ಬೀದರ್ ನಿಂದ ಒಟ್ಟು 27 ಜನರು ದೆಹಲಿ ನಿಜಾಮುದ್ದೀನ್ ಮರ್ಕಜ್‍ಗೆ ತೆರಳಿದ್ದರು. 27 ಜನರಲ್ಲಿ 11 ಮಂದಿಗೆ ಕೊರೊನಾ ತಗುಲಿದೆ ಎಂದು ಬೀದರ್ ಜಿಲ್ಲಾಧಿಕಾರಿ ಮಹದೇವ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಿಂದ ಮೌಲ್ವಿಗಳು ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ರಾಜ್ಯದಿಂದ ದೆಹಲಿಗೆ ಹೋಗಿ ಬಂದವರ ಸಂಖ್ಯೆ 430 ದಾಟಿದೆ. ಇವರಲ್ಲಿ ಇದುವರೆಗೆ ರಾಜ್ಯ ಸರ್ಕಾರ 391 ಮಂದಿಯನ್ನು ಪತ್ತೆ ಹಚ್ಚಿದೆ. ಈ ಪೈಕಿ 200 ಮಂದಿಯನ್ನು ಆಸ್ಪತ್ರೆಗಳಲ್ಲಿ ಇರಿಸಿ ನಿಗಾ ವಹಿಸಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೇನ್ ಮಾಡಲಾಗಿದೆ. ಉಳಿದವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button