Cancer Hospital 2
Beereshwara 36
LaxmiTai 5

*ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ರಾಜ್ಯದಲ್ಲಿಯೇ ನಡೆದ ಪೈಶಾಚಿಕ ಕೃತ್ಯ*

Anvekar 3

ಪ್ರಗತಿವಾಹಿನಿ ಸುದ್ದಿ; ಬೀದರ್: ಅಪ್ಪ ಅಂದರೆ ಭದ್ರತೆಯ ಭಾವನೆ… ಅಪ್ಪ-ಮಗಳ ಬಾಂಧವ್ಯಕ್ಕೆ ಬೇರಾರೂ ಸರಿಸಾಟಿಯೇ ಇರಲ್ಲ… ಆದರೆ ಇಲ್ಲೋರ್ವ ನೀಚ ತಂದೆ ತನ್ನ ಮಗಳ ಮೇಲೆಯೇ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಬೆಳಕಿಗೆ ಬಂದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಸ್ವಂತ ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾನೆ.

Emergency Service

ರಾತ್ರಿ ಮನೆಯಲ್ಲಿ ಎಲ್ಲರೂ ನಿದ್ರೆಗೆ ಜಾರಿದ ಮೇಲೆ ಯಾರಿಗೂ ಗೊತ್ತಾಗದಂತೆ ತಂದೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಬಾಲಕಿಯ ಅಜ್ಜಿಯ ಕೈಗೆ ರೆಡ್ ಹ್ಯಾಂಡ್ ಆಗಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಕಳೆದ ಒಂದು ವರ್ಷದಿಂದ ತಂದೆ ತನ್ನ ಮಗಳ ಮೇಲೆ ಪೈಶಾಚಿಕ ಕೃತ್ಯವೆಸಗುತ್ತಿದ್ದ. ಯಾರಿಗಾದರೂ ಈ ವಿಚಾರ ಹೇಳಿದರೆ ಕೊಲೆ ಮಾಡುವುದಾಗಿ ಮಗಳನ್ನು ಬೆದರಿಸಿದ್ದ ಎಂದು ತಿಳಿದುಬಂದಿದೆ.

ಬಾಲಕಿಯ ಅಜ್ಜಿ ಬಸವಕಲ್ಯಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Bottom Add3
Bottom Ad 2